Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:3 - ಕನ್ನಡ ಸತ್ಯವೇದವು C.L. Bible (BSI)

3 ಮಾನವರು ಹೊರದೂಡುತ್ತಾರೆ ಕತ್ತಲನು ಕತ್ತಲು-ಕಾರ್ಗತ್ತಲಲ್ಲೂ ಹುಡುಕುತ್ತಾರೆ ಲೋಹಗಳನು. ತೋಡುತ್ತಿರುತ್ತಾರೆ ಅವು ದೊರಕುವವರೆಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನುಷ್ಯರು ಕತ್ತಲನ್ನು ಹೋಗಲಾಡಿಸಿ ಕಾರ್ಗತ್ತಲಲ್ಲಿಯೂ ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ತನಕ ಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:3
11 ತಿಳಿವುಗಳ ಹೋಲಿಕೆ  

ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.


ಕಬ್ಬಿಣವನ್ನು ತೆಗೆಯುತ್ತಾರೆ ಮಣ್ಣಿನಿಂದ ತಾಮ್ರವನ್ನು ಕಡೆಯುತ್ತಾರೆ ಕಲ್ಲನ್ನು ಕರಗಿಸುತಾ.


ಗಣಿಯನ್ನು ತೋಡಿತೋಡಿ ಜನನಿವಾಸಿಗಳಿಗೆ ದೂರವಾಗಿ ಮೇಲ್ಗಡೆ ನಡೆದಾಡುವವರನ್ನು ಮರೆತುಹೋಗಿ ಅತ್ತಿತ್ತ ಅಲೆದಾಡುತ್ತಾರೆ ನರಲೋಕಕ್ಕೆ ಅನ್ಯರಾಗಿ.


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು