Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 28:7 - ಕನ್ನಡ ಸತ್ಯವೇದವು C.L. Bible (BSI)

7 ಆ ದಾರಿ ತಿಳಿಯದು ಯಾವ ಹದ್ದಿಗೂ ಅದು ಬಿದ್ದಿಲ್ಲ ಯಾವ ಗಿಡುಗದ ಕಣ್ಣಿಗೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಾಡುಪಕ್ಷಿಗಳಿಗೆ ಗಣಿಯ ಮಾರ್ಗವು ಗೊತ್ತಿಲ್ಲ. ಯಾವ ಗಿಡುಗವೂ ಕತ್ತಲೆಯ ಆ ಮಾರ್ಗಗಳನ್ನು ನೋಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 28:7
7 ತಿಳಿವುಗಳ ಹೋಲಿಕೆ  

ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಬೆಳಕು ಏರಿಬರುವ ಜಾಗವೆಲ್ಲಿ? ಬಿಸಿಗಾಳಿ ಬೀಸಿಬರುವ ಮಾರ್ಗವೆಲ್ಲಿ?


ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?


ನೀಲಿರತ್ನಗಳು ಸಿಗುತ್ತವೆ ಭುವಿಯ ಕಲ್ಲುಗಳಲಿ ಚಿನ್ನಚಿಗುರು ದೊರಕುತ್ತದೆ ಅದರ ಧೂಳಿನಲಿ.


ಕಾಡುಮೃಗಗಳು ಅದನ್ನು ತುಳಿದಿಲ್ಲ ಸಿಂಹವು ಆ ಮಾರ್ಗದಲ್ಲಿ ಸುಳಿದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು