Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:14 - ಕನ್ನಡ ಸತ್ಯವೇದವು C.L. Bible (BSI)

14 ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:14
16 ತಿಳಿವುಗಳ ಹೋಲಿಕೆ  

ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.


ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”


ನ್ಯಾಯನೀತಿಯನ್ನು ಬಿಡದೆ ಹಿಡಿವೆನು ಭದ್ರವಾಗಿ ನನ್ನ ಬಾಳಿನ ಯಾವ ದಿನದಂದೂ ನಿಂದಿಸಿದ್ದಿಲ್ಲ ನನ್ನ ಮನಸ್ಸಾಕ್ಷಿ.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ;


ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.


ಕೈಗೊಳ್ಳುವೆ ನೀತಿಯುತ ನಿನ್ನಾ ವಿಧಿಗಳನು I ಬಲಾತ್ಕಾರಿಗಳಿಗೊಪ್ಪಿಸಬೇಡ ನನ್ನನ್ನು II


“ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು.


ಆ ಲಿಖಿತವನ್ನು ಹೆಗಲ ಮೇಲೆ ಹೊತ್ತು ನಡೆಯುತ್ತಿದ್ದೆ ಅದನ್ನು ಪೇಟವಾಗಿ ತಲೆಗೆ ಸುತ್ತಿಕೊಳ್ಳುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು