Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:16 - ಕನ್ನಡ ಸತ್ಯವೇದವು C.L. Bible (BSI)

16 ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದರಿದ್ರರಿಗೆ ತಂದೆಯಾಗಿ ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:16
19 ತಿಳಿವುಗಳ ಹೋಲಿಕೆ  

ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ.


ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ.


ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.


ತಂದೆತಾಯಿಗಳನ್ನು ಕಳೆದುಕೊಂಡು ಅನಾಥಳಾಗಿದ್ದ ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳನ್ನು (ಹದೆಸ್ಸಾ ಆಕೆಯ ಇನ್ನೊಂದು ಹೆಸರು) ತನ್ನ ಸ್ವಂತ ಮಗಳಂತೆ ಸ್ವೀಕರಿಸಿ ಸಾಕುತ್ತಿದ್ದನು. ಈಕೆ ಬಲು ರೂಪಸಿ ಹಾಗು ಲಾವಣ್ಯವತಿಯಾಗಿದ್ದಳು.


ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.


ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,


ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.


ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.


“ನಿಮ್ಮ ಸೇವಕ ನನಗೆ ಹೀಗೆ ಮಾಡಿದ,” ಎಂಬ ಆಕೆಯ ಮಾತನ್ನು ಕೇಳಿ ಜೋಸೆಫನ ದಣಿ ಕಿಡಿಕಿಡಿಯಾದ.


ಆಗ ಅರಸನು, “ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ,” ಎಂದು ಹೇಳಿದನು.


ಕಷ್ಟಾನುಭವಿಯನು ಕಂಡು ನಾನು ಕಣ್ಣೀರಿಡಲಿಲ್ಲವೆ? ದಟ್ಟದರಿದ್ರರಿಗೋಸ್ಕರ ನಾನು ದುಃಖಪಡಲಿಲ್ಲವೆ?


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು