Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ನಾನಿಂತೆಂದೆ: ‘ನನ್ನ ಗೂಡಿನಲ್ಲೇ ಹಾಯಾಗಿ ಸಾಯುವೆ ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುತ್ತವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನಾನು ಹೇಳಿಕೊಂಡದ್ದೇನಂದರೆ - ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುವವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನನ್ನ ಬಗ್ಗೆ ಆಲೋಚಿಸುತ್ತಾ, ‘ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆಗ ನಾನು, ‘ನನ್ನ ಮನೆಯಲ್ಲಿಯೇ ನಾನು ಸಾಯುವೆನು; ಮರಳಿನಂತೆ ನನ್ನ ದಿವಸಗಳು ಇರುತ್ತವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:18
12 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಹೀಗೆ ಕೂಡಿಸಿದ ದವಸಧಾನ್ಯ ಸಮುದ್ರದ ಮರಳಿನಂತೆ ರಾಶಿರಾಶಿಯಾಗಿತ್ತು. ಲೆಕ್ಕಮಾಡುವುದಕ್ಕೂ ಆಗದೆ ಲೆಕ್ಕ ಇಡುವುದನ್ನೇ ಬಿಟ್ಟುಬಿಡಬೇಕಾಯಿತು.


ದುರ್ಜನರ ದವಡೆಯನು ಮುರಿಯುತ್ತಿದ್ದೆ. ಅವರ ಹಲ್ಲುಗಳಿಂದಲೂ ಬೇಟೆಯನು ಬಿಡಿಸುತ್ತಿದ್ದೆ.


ನನ್ನ ಬೇರುಗಳು ನೀರಿನವರೆಗೆ ವ್ಯಾಪಿಸಿಕೊಂಡಿವೆ ನನ್ನ ರೆಂಬೆಗಳ ಮೇಲೆ ರಾತ್ರಿಯೆಲ್ಲ ಇಬ್ಬನಿ ಬಿದ್ದಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು