Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:23 - ಕನ್ನಡ ಸತ್ಯವೇದವು C.L. Bible (BSI)

23 ನನ್ನನ್ನು ಮಳೆಯಂತೆ ಎದುರುನೋಡುತ್ತಿದ್ದರು ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರುನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು. ಮುಂಗಾರಿನ ಮಳೆಯಹಾಗೆ ನನ್ನ ಮಾತುಗಳಲ್ಲಿ ಉಲ್ಲಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:23
9 ತಿಳಿವುಗಳ ಹೋಲಿಕೆ  

ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


ನಾನು ಮಾತಾಡಿದ ಮೇಲೆ ಅವರು ಮಾತೆತ್ತುತ್ತಿರಲಿಲ್ಲ ನನ್ನ ಮಾತು ಹನಿಹನಿಯಾಗಿ ಅವರ ಕಿವಿಗೆ ಬೀಳುತ್ತಿತ್ತು.


ಅವರು ಎದೆಗೆಟ್ಟಾಗ ನಾನು ನಗೆಬೀರುತ್ತಿದ್ದೆ ನನ್ನ ಮುಖಕಾಂತಿಯಿಂದ ಹುರಿದುಂಬಿಸುತ್ತಿದ್ದೆ.


“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II


ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.


ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು