Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು; ನಾನು ದೇವರ ಬೆಳಕಿನಿಂದ ಕತ್ತಲಲ್ಲಿ ನಡೆಯುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:3
19 ತಿಳಿವುಗಳ ಹೋಲಿಕೆ  

ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


ಕೆಟ್ಟವನಿಗೆ ಶುಭಕಾಲ ಬಾರದು, ದುಷ್ಟರ ದೀಪ ಆರಿಹೋಗುವುದು.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?


ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ I ದೇವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ II


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು