Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವಶಕ್ತನು ಆಗ ನನ್ನ ಸಂಗಡವಿದ್ದನು ನನ್ನ ಸುತ್ತಲೂ ನನ್ನ ಮಕ್ಕಳು ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸರ್ವಶಕ್ತನು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ದಿನಗಳಲ್ಲಿ ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು; ನನ್ನ ಮಕ್ಕಳು ನನ್ನ ಸುತ್ತಲೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:5
19 ತಿಳಿವುಗಳ ಹೋಲಿಕೆ  

ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II


ಬರಮಾಡಿಕೊಂಡನು ನನ್ನನು ಔತಣದ ಮನೆಗೆ ನನ್ನ ಮೇಲೆತ್ತಿದನು ‘ಪ್ರೀತಿ’ ಎಂಬ ತನ್ನ ಪತಾಕೆ.


ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ!


ಆ ದಿನಗಳು ನನ್ನ ಜೀವಮಾನದ ಸುಗ್ಗಿಕಾಲವಾಗಿತ್ತು ದೇವರ ಪ್ರೀತಿ ನನ್ನ ಗುಡಾರವನ್ನು ಆವರಿಸಿತ್ತು.


ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು