Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:6 - ಕನ್ನಡ ಸತ್ಯವೇದವು C.L. Bible (BSI)

6 ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಹೆಜ್ಜೆಗಳು ಮೊಸರಿನಲ್ಲಿ ಮುಣುಗುತ್ತಿದ್ದವು, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:6
7 ತಿಳಿವುಗಳ ಹೋಲಿಕೆ  

“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II


ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು.


ಆಶೇರ್ ಕುಲ ಕುರಿತು ಮೋಶೆ ನುಡಿದದ್ದು: “ಕುಲೋತ್ತಮನಾದ ಆಶೇರನು ಭಾಗ್ಯಹೊಂದಲಿ ಎಲ್ಲದರಲಿ ಸೋದರರಲ್ಲಿ ಶ್ರೇಷ್ಠತೆಯನು ಪಡೆಯಲಿ ಎಣ್ಣೆಯಲಿ ಪಾದಸ್ನಾನ ಮಾಡುವಂತಾಗಲಿ.


ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


ಸರ್ವಶಕ್ತನು ಆಗ ನನ್ನ ಸಂಗಡವಿದ್ದನು ನನ್ನ ಸುತ್ತಲೂ ನನ್ನ ಮಕ್ಕಳು ಇರುತ್ತಿದ್ದರು.


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು