Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:8 - ಕನ್ನಡ ಸತ್ಯವೇದವು C.L. Bible (BSI)

8 ಯುವಕರು ಸರಿಯುತ್ತಿದ್ದರು ಪಕ್ಕಕ್ಕೆ ಮುದುಕರು ಎದ್ದು ನಿಲ್ಲುತ್ತಿದ್ದರು ತಟ್ಟನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೌವನಸ್ಥರು ನನ್ನನ್ನು ನೋಡಿ ಹಿಂದಾದರು, ವೃದ್ಧರು ಎದ್ದು ನಿಂತರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಲ್ಲಿದ್ದ ಜನರೆಲ್ಲರೂ ನನ್ನನ್ನು ಗೌರವಿಸುತ್ತಿದ್ದರು; ಯೌವನಸ್ಥರು ನನ್ನನ್ನು ಕಂಡು ಹಿಂದಕ್ಕೆ ಸರಿದು ದಾರಿಮಾಡಿಕೊಡುತ್ತಿದ್ದರು; ವೃದ್ಧರು ಗೌರವದಿಂದ ಎದ್ದುನಿಂತುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು; ವೃದ್ಧರು ಸಹ ಎದ್ದು ನಿಲ್ಲುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:8
10 ತಿಳಿವುಗಳ ಹೋಲಿಕೆ  

“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ಮಂತ್ರಿಗಳೂ ಕೈಯಿಟ್ಟು ಬಾಯ ಮೇಲೆ ಮೌನತಾಳುತ್ತಿದ್ದರು ಮಾತೆತ್ತದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು