Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:10 - ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ ಅದು ನನ್ನ ತಾಯಿಯ ಗರ್ಭದ್ವಾರವನು ನನಗೆ ಮುಚ್ಚಲಿಲ್ಲ ನನ್ನ ಕಣ್ಗಳಿಂದ ದುಃಖದುಗುಡವನು ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ರಾತ್ರಿಯು ನನ್ನ ತಾಯಿಯ ಗರ್ಭ ದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆ ಮಾಡಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೆಂದರೆ ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ, ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:10
12 ತಿಳಿವುಗಳ ಹೋಲಿಕೆ  

ತಾಯಗರ್ಭದಲ್ಲಿರುವಾಗಲೆ ಅವನೇಕೆ ನನ್ನನ್ನು ಕೊಂದುಹಾಕಲಿಲ್ಲ? ಆಗ ನನ್ನ ತಾಯೇ ನನಗೆ ಗೋರಿಯಾಗುತ್ತಿದ್ದಳಲ್ಲಾ ! ಆಕೆಯ ಗರ್ಭ ಸದಾ ಬಸಿರಾಗಿಯೇ ಇರುತ್ತಿತ್ತಲ್ಲಾ !


ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ಇದಕ್ಕೆ ಮುಂಚೆ ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರೆಲ್ಲರನ್ನು ಸರ್ವೇಶ್ವರ ಸ್ವಾಮಿ ಬಂಜೆಯರನ್ನಾಗಿಸಿದ್ದರು.


ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ!


ಹುಟ್ಟುವಾಗಲೇ ನಾನೇಕೆ ಸಾಯಲಿಲ್ಲ? ಉದರದಿಂದ ಬಂದೊಡನೆ ನಾನೇಕೆ ಮಡಿಯಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು