Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಹುಟ್ಟಿದಾಗಲೇ ಸತ್ತುಹೋಗಿದ್ದರೆ, ಸಮಾಧಾನದಿಂದ ನಿದ್ರೆಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:13
22 ತಿಳಿವುಗಳ ಹೋಲಿಕೆ  

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಒಬ್ಬ ಸಾಯುತ್ತಾನೆ ಸಮೃದ್ಧನಾಗಿರುವಾಗ ಸುಖಶಾಂತಿಯಿಂದ ನೆಮ್ಮದಿಯಾಗಿರುವಾಗ.


ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.


ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು.


ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ,


ಕಾರ್ಗತ್ತಲೂ ಗಾಢಾಂಧಕಾರವೂ ಅಲ್ಲಿವೆ ಅರಾಜಕತೆಯೂ ಕಾರಿರುಳೂ ಅದನು ಆವರಿಸಿವೆ ಬೆಳಕೇ ಕಾರಿರುಳಾಗಿ ಆ ನಾಡನ್ನು ಕವಿದಿದೆ.”


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ತಾಯಿಯ ಮಡಿಲು ನನ್ನನು ಹೊತ್ತುದೇಕೆ? ಆ ತಾಯ್ಮೊಲೆಗಳು ನನಗೆ ಕುಡಿಯಕೊಟ್ಟುದೇಕೆ?


ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.


ನೀನು ಅವನನ್ನು ಶಾಶ್ವತವಾಗಿ ಸೋಲಿಸಿಬಿಡುವೆ ಅವನು ಗತಿಸಿಹೋಗುವನು. ಅವನನ್ನು ವಿಕಾರಗೊಳಿಸಿ ತೊಲಗಿಸಿಬಿಡುವೆ.


ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.


ಬರಗಾಲ-ಬೇಸಿಗೆ ಹಿಮವನು ಹೀರಿಕೊಳ್ಳುವಂತೆ ಪಾತಾಳದ ಕೂಪ ಪಾಪಿಯನು ಸೆಳೆದುಕೊಳ್ಳುತ್ತದೆ.


ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು.


ಬಿಲ್ದದನು: ಜಲಚರಗಳಿಂದ ತುಂಬಿದ ಸಾಗರದ ಕೆಳಗಿನ ಲೋಕದೊಳು (ದೇವರ ಭಯದಿಂದ) ಯಾತನೆಪಡುತ್ತಿವೆ ಪ್ರೇತಗಳು.


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು