Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:19 - ಕನ್ನಡ ಸತ್ಯವೇದವು C.L. Bible (BSI)

19 ಚಿಕ್ಕವರು ದೊಡ್ಡವರು ಎಂಬ ತಾರತಮ್ಯ ಅಲ್ಲಿಲ್ಲ ಗುಲಾಮ ಯಜಮಾನನೆಂಬ ನಿಯಮವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ, ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಮಾಧಿಯಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:19
13 ತಿಳಿವುಗಳ ಹೋಲಿಕೆ  

ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ಜನಸಾಮಾನ್ಯರೆ, ಜನಾಧಿಪತಿಗಳೆ, ದರಿದ್ರರೆ, ಧನವಂತರೆ I ನೀವೆಲ್ಲರು ನನ್ನ ಮಾತುಗಳಿಗೆ ಕಿವಿಗೊಟ್ಟು ಆಲಿಸಿರೈ II


ಸೆರೆಯಾಳುಗಳಿಗೆ ದಣಿಯ ಕರ್ಕಶದನಿ ಕೇಳಿಸದು ಅಲ್ಲಿ ಖೈದಿಗಳು ಸಾಮೂಹಿಕವಾಗಿ ವಿಶ್ರಮಿಸಿಕೊಳ್ಳುವರಲ್ಲಿ.


ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು.


ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು