Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:4 - ಕನ್ನಡ ಸತ್ಯವೇದವು C.L. Bible (BSI)

4 ಆ ದಿನವು ಕಗ್ಗತ್ತಲಾಗಲಿ ಸೂರ್ಯನ ಬೆಳಕು ಅದರ ಮೇಲೆ ಬೀಳದಿರಲಿ ಉನ್ನತ ದೇವರು ಅದನ್ನು ಲೆಕ್ಕಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ದಿವಸವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ದಿನವು ಕತ್ತಲೆಯಾಗಲಿ. ಆ ದಿನದ ಬಗ್ಗೆ ಮೇಲಿನ ಲೋಕದ ದೇವರು ಯೋಚಿಸದಿರಲಿ. ಆ ದಿನದ ಮೇಲೆ ಬೆಳಕು ಬೆಳಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದಿವಸವು ಕತ್ತಲಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:4
9 ತಿಳಿವುಗಳ ಹೋಲಿಕೆ  

ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.


ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು