Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 3:5 - ಕನ್ನಡ ಸತ್ಯವೇದವು C.L. Bible (BSI)

5 ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕತ್ತಲೆಯೂ ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ; ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 3:5
25 ತಿಳಿವುಗಳ ಹೋಲಿಕೆ  

ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಮಾನವರು ಹೊರದೂಡುತ್ತಾರೆ ಕತ್ತಲನು ಕತ್ತಲು-ಕಾರ್ಗತ್ತಲಲ್ಲೂ ಹುಡುಕುತ್ತಾರೆ ಲೋಹಗಳನು. ತೋಡುತ್ತಿರುತ್ತಾರೆ ಅವು ದೊರಕುವವರೆಗು.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?


ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ.


ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II


ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II


ಕಣ್ಣೀರು ಸುರಿಸಿ ನನ್ನ ಮುಖ ಕೆಂಪೇರಿದೆ ನನ್ನ ಕಣ್ಣುಗಳಿಗೆ ಕಾರಿರುಳು ಕವಿದಿದೆ.


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ಆ ದಿನವು ಕಗ್ಗತ್ತಲಾಗಲಿ ಸೂರ್ಯನ ಬೆಳಕು ಅದರ ಮೇಲೆ ಬೀಳದಿರಲಿ ಉನ್ನತ ದೇವರು ಅದನ್ನು ಲೆಕ್ಕಿಸದಿರಲಿ.


ಕಾರ್ಗತ್ತಲು ಆ ರಾತ್ರಿಯನ್ನು ಮುತ್ತಲಿ ಆ ಇರುಳು ತಿಂಗಳ ಲೆಕ್ಕಕೆ ಸೇರದಿರಲಿ ಪಂಚಾಂಗದಲಿ ಅದು ಪರಿಗಣಿತವಾಗದಿರಲಿ.


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು