ಯೋಬ 30:1 - ಕನ್ನಡ ಸತ್ಯವೇದವು C.L. Bible (BSI)1 “ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿ ಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿಬಿಟ್ಟಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು, ನನ್ನನ್ನು ನೋಡಿ ಪರಿಹಾಸ್ಯ ಮಾಡುತ್ತಾರೆ. ಇವರ ಪಿತೃಗಳನ್ನು ನನ್ನ ಕುರಿಮಂದೆಯ ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆನು. ಅಧ್ಯಾಯವನ್ನು ನೋಡಿ |