Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:15 - ಕನ್ನಡ ಸತ್ಯವೇದವು C.L. Bible (BSI)

15 ಅಡ್ಡಿ ಆತಂಕಗಳು ನನ್ನನು ಸುತ್ತುವರೆದಿವೆ ನನ್ನ ಮಾನಮರ್ಯಾದೆ ತೂರಿಹೋಗುತ್ತಿದೆ ಗಾಳಿಯಂತೆ ನನ್ನ ಯೋಗಕ್ಷೇಮ ತೇಲಿಹೋಗುತ್ತಿದೆ ಮೋಡದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:15
15 ತಿಳಿವುಗಳ ಹೋಲಿಕೆ  

ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.


ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.


ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ ಯಾವುದಕ್ಕೆ ಅಂಜುತ್ತೇನೊ, ಅದೇ ತಪ್ಪದೆ ಸಂಭವಿಸುತ್ತದೆ.


ಅಗಲವಾದ ಕೋಟೆಬಿರುಕುಗಳಲಿ ನುಗ್ಗಿಬರುತ್ತಿದ್ದಾರೆ ಹಾಳುಬೀಳಿನಲಿ ನಿಂತಿರುವ ನನ್ನ ಮೇಲೆ ಉರುಳಿಬೀಳಲಿದ್ದಾರೆ.


ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II


ನನ್ನನು ಆವರಿಸಿಕೊಂಡಿದೆ ನಿನ್ನ ಕಡುಕೋಪಾಗ್ನಿಯು I ನನ್ನ ಹಾಳುಮಾಡುತ್ತಿದೆ ನಿನ್ನ ಭಯಂಕರ ದಾಳಿಯು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು