Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:16 - ಕನ್ನಡ ಸತ್ಯವೇದವು C.L. Bible (BSI)

16 ನನ್ನ ಮನ ಕರಗಿ ನೀರಾಗಿದೆ ಬಾಧೆಗಳು ನನ್ನನು ಬಿಗಿಹಿಡಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:16
8 ತಿಳಿವುಗಳ ಹೋಲಿಕೆ  

ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.


ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು