Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:20 - ಕನ್ನಡ ಸತ್ಯವೇದವು C.L. Bible (BSI)

20 ದೇವರೇ, ನಾನು ಮೊರೆಯಿಟ್ಟರೂ ಉತ್ತರಕೊಡದಿರುವೆ ನಾನೆದ್ದು ನಿಂತರೂ ನೀನು ಸುಮ್ಮನೆ ನೋಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಮೊರೆಯಿಟ್ಟರೂ ನೀನು ಉತ್ತರಕೊಡುವದಿಲ್ಲ, ಎದ್ದುನಿಂತರೂ ನನ್ನನ್ನು [ಸುಮ್ಮನೆ] ನೋಡುತ್ತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ದೇವರೇ, ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಡುವೆನು, ಆದರೆ ನೀನು ಉತ್ತರಿಸುವುದಿಲ್ಲ. ನಾನು ಎದ್ದುನಿಂತು ಪ್ರಾರ್ಥಿಸಿದರೂ ನೀನು ನನಗೆ ಗಮನ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ದೇವರೇ, ನಿಮಗೆ ಮೊರೆಯಿಡುತ್ತೇನೆ ಆದರೆ ನೀವು ನನಗೆ ಉತ್ತರ ಕೊಡುವುದಿಲ್ಲ, ನಾನು ಎದ್ದುನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:20
10 ತಿಳಿವುಗಳ ಹೋಲಿಕೆ  

‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.


ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?


ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.


ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II


ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು