Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:23 - ಕನ್ನಡ ಸತ್ಯವೇದವು C.L. Bible (BSI)

23 ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:23
12 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.


ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು.


ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.


ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.


ಚಿಕ್ಕವರು ದೊಡ್ಡವರು ಎಂಬ ತಾರತಮ್ಯ ಅಲ್ಲಿಲ್ಲ ಗುಲಾಮ ಯಜಮಾನನೆಂಬ ನಿಯಮವೂ ಇಲ್ಲ.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು