Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:25 - ಕನ್ನಡ ಸತ್ಯವೇದವು C.L. Bible (BSI)

25 ಕಷ್ಟಾನುಭವಿಯನು ಕಂಡು ನಾನು ಕಣ್ಣೀರಿಡಲಿಲ್ಲವೆ? ದಟ್ಟದರಿದ್ರರಿಗೋಸ್ಕರ ನಾನು ದುಃಖಪಡಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಷ್ಟಾನುಭವಿಯನ್ನು ಕಂಡು ಅಳುವವನೂ ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:25
20 ತಿಳಿವುಗಳ ಹೋಲಿಕೆ  

ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


“ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಯೇಸು ಕಣ್ಣೀರಿಟ್ಟರು.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II


ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.


ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು