Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:27 - ಕನ್ನಡ ಸತ್ಯವೇದವು C.L. Bible (BSI)

27 ಕರುಳು ಕುದಿಯುತ್ತಿದೆ ಅಶಾಂತಿಯಿಂದ ಬಂದೊದಗಿದೆ ನನಗೆ ಬಾಧೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ಹೊಟ್ಟೆಯು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನನ್ನ ಅಂತರಂಗವು ಕುದಿಯುತ್ತಿದೆ; ಸಂಕಟವು ನಿಲ್ಲುತ್ತಲೇ ಇಲ್ಲ. ಸಂಕಟವು ಈಗ ತಾನೆ ಆರಂಭಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ಹೃದಯವು ಯಾವಾಗಲೂ ಅಶಾಂತಿಯಿಂದ ಕುದಿಯುತ್ತಿದೆ; ಸಂಕಟಗಳ ದಿವಸಗಳು ನನ್ನನ್ನು ಎದುರಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:27
7 ತಿಳಿವುಗಳ ಹೋಲಿಕೆ  

ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II


ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.


ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು