Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:31 - ಕನ್ನಡ ಸತ್ಯವೇದವು C.L. Bible (BSI)

31 ಅಳುವ ಧ್ವನಿ ಕೇಳಿಸುತ್ತಿದೆ ನನ್ನ ಕೊಳಲಿನಲಿ ಗೋಳಾಟದ ಸ್ವರವಿದೆ ನನ್ನ ಕಿನ್ನರಿಯಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿ ಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನನ್ನ ಕಿನ್ನರಿಯಲ್ಲಿ ಗೋಳಾಟದ ಧ್ವನಿಯು ಕೇಳಿಸುತ್ತಿದೆ. ನನ್ನ ಕೊಳಲಿನಲ್ಲಿ ಅಳುವವರ ಸ್ವರವೇ ಕೇಳಿಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:31
9 ತಿಳಿವುಗಳ ಹೋಲಿಕೆ  

ಸಂತೋಷವು ನಮ್ಮ ಹೃದಯದಿಂದ ಮಾಯವಾಗಿದೆ ನಮ್ಮ ನಾಟ್ಯನಲಿವು ದುಃಖಕರವಾಗಿ ಮಾರ್ಪಟ್ಟಿದೆ.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ಸಂತೈಸುವ ಸೂರ್ಯನಿಲ್ಲದೆ ಅಲೆಯುತ್ತಿರುವೆ ಮಂಕು ಕವಿದು ಅಂಗಲಾಚುತ್ತಿರುವೆ ಸಭೆಯ ಮಧ್ಯೆ ನಿಂತು.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು