Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ಸತಿ ಮತ್ತೊಬ್ಬನಿಗೆ ಧಾನ್ಯಬೀಸುವ ದಾಸಿಯಾಗಲಿ ಅಂಥ ನನ್ನ ಸತಿಯೊಡನೆ ಇತರರು ಸಂಗಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗವಿುಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಹೆಂಡತಿಯು ಬೇರೊಬ್ಬನಿಗೆ ಸೇವಕಿಯಾಗಲಿ; ಬೇರೆಯವರು ಆಕೆಯೊಂದಿಗೆ ಮಲಗಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ, ಮತ್ತೊಬ್ಬರು ಅವಳ ಸಂಗಡ ಮಲಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:10
9 ತಿಳಿವುಗಳ ಹೋಲಿಕೆ  

ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಬೀಸುವ ಕಲ್ಲನು ಹಿಡಿ, ಹಿಟ್ಟಿಗಾಗಿ ನೆರಿಗೆಯನ್ನು ಹರಿ, ಮುಸುಕನ್ನು ತೆಗೆದುಹಾಕಿ ಹೊಳೆಗಳನ್ನು ಹಾದುಹೋಗು, ನಡೆ ಬರೆಗಾಲಿನಲ್ಲಿ.


ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.


“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.


ಆಗ, ಸಿಂಹಾಸನಾರೂಢನಾದ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಬೀಸುಕಲ್ಲನ್ನು ಹಿಡಿದು ಕೂತಿರುವ ದಾಸಿಯ ಚೊಚ್ಚಲು ಮಗನವರೆಗೂ ಈಜಿಪ್ಟ್ ದೇಶದಲ್ಲಿ ಚೊಚ್ಚಲು ಮಕ್ಕಳೆಲ್ಲರು ಸಾಯುವರು. ಪಶುಪ್ರಾಣಿಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವುವು.


ಒಂದೇ ಕಲ್ಲಿನಲ್ಲಿ ಬೀಸುತ್ತ ಇರುವ ಇಬ್ಬರು ಮಹಿಳೆಯರಲ್ಲಿ ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.


ನೀನು ಅದನ್ನು ಗುಪ್ತವಾಗಿ ಮಾಡಿದೆ. ನಾನು ಹೇಳುವ ಮಾತಾದರೋ ಇಸ್ರಯೇಲರೆಲ್ಲರ ಮುಂದೆ ಬಹಿರಂಗವಾಗಿ ನೆರವೇರುವುದು,’” ಎಂದನು.


ನನ್ನ ಹೆಗಲಿನ ಕೀಲು ತಪ್ಪಿಹೋಗಲಿ ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು