Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:14 - ಕನ್ನಡ ಸತ್ಯವೇದವು C.L. Bible (BSI)

14 ದೇವರು ನ್ಯಾಯಸ್ಥಾಪನೆಗೆ ನಿಂತಾಗ ನಾನೇನು ಮಾಡುತ್ತಿದ್ದೆ? ಆತ ವಿಚಾರಣೆಗೆ ಬಂದಾಗ ನಾನೇನು ಉತ್ತರಕೊಡುತ್ತಿದ್ದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರು [ನ್ಯಾಯಸ್ಥಾಪನೆಗೆ] ಏಳುವಾಗ ನಾನು ಏನು ಮಾಡೇನು? ಆತನು ವಿಚಾರಿಸುವಾಗ ಯಾವ ಉತ್ತರ ಕೊಟ್ಟೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರ ಕೊಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:14
19 ತಿಳಿವುಗಳ ಹೋಲಿಕೆ  

ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.


ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.


ನನ್ನ ದಾಸದಾಸಿಯರು ನನ್ನ ಮೇಲೆ ತಪ್ಪುಹೊರಿಸಿದ್ದರೆ ನಾನು ಆ ತಪ್ಪನು ಅಸಡ್ಡೆ ಮಾಡಿದವನಾಗಿದ್ದರೆ,


ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?


ಅವರಿಂದ ಕಠಿಣವಾದ ಸೇವೆ ಮಾಡಿಸಿಕೊಳ್ಳಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು