Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:16 - ಕನ್ನಡ ಸತ್ಯವೇದವು C.L. Bible (BSI)

16 ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಬಡವರ ಇಷ್ಟವನ್ನು ಭಂಗಪಡಿಸಿ ವಿಧವೆಯನ್ನು ಕಂಗೆಡಿಸಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಬಡಜನರಿಗೆ ಸಹಾಯಮಾಡಲು ನಾನೆಂದೂ ನಿರಾಕರಿಸಲಿಲ್ಲ; ವಿಧವೆಯರಿಗೆ ಬೇಕಾದದ್ದನ್ನೆಲ್ಲ ನಾನು ಒದಗಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:16
23 ತಿಳಿವುಗಳ ಹೋಲಿಕೆ  

ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಮಂದವಾಯಿತೆನ್ನ ನೇತ್ರ ನಿನ್ನ ರಕ್ಷಣೆಗಾಗಿ ಕಾಯುತ I ನೀತಿಯುತ ನಿನ್ನ ನುಡಿ ಈಡೇರುವುದನು ನಿರೀಕ್ಷಿಸುತ II


ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.


ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.


ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;


ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು