Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:17 - ಕನ್ನಡ ಸತ್ಯವೇದವು C.L. Bible (BSI)

17 ಅನಾಥರೊಂದಿಗೆ ಅನ್ನವನು ಹಂಚಿಕೊಳ್ಳದೆ ತುತ್ತನ್ನೆಲ್ಲಾ ನಾನೇ ಒಂಟಿಯಾಗಿ ಉಂಡೆನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ ನಾನೇ ಒಂಟಿಗನಾಗಿ ತಿಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಸ್ವಾರ್ಥದಿಂದ ನನ್ನ ಆಹಾರವನ್ನು ಎಂದೂ ಇಟ್ಟುಕೊಳ್ಳಲಿಲ್ಲ. ಅನಾಥರು ಹಸಿವೆಯಿಂದಿರಲು ನಾನೆಂದೂ ಅವಕಾಶ ಕೊಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:17
16 ತಿಳಿವುಗಳ ಹೋಲಿಕೆ  

ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ದಣಿದವನಿಗೆ ನೀ ಕೊಡಲಿಲ್ಲ ಪಾನ ಹಸಿದವನಿಗೆ ಬಡಿಸಲಿಲ್ಲ ಅನ್ನ.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸಧಾನ್ಯ, ದ್ರಾಕ್ಷರಸ ಇವುಗಳಲ್ಲಿ ಉದಾರವಾಗಿ ಕೊಟ್ಟುಕಳುಹಿಸಬೇಕು.


ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ.


‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.


ತಂದೆತಾಯಿಗಳನ್ನು ಕಳೆದುಕೊಂಡು ಅನಾಥಳಾಗಿದ್ದ ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳನ್ನು (ಹದೆಸ್ಸಾ ಆಕೆಯ ಇನ್ನೊಂದು ಹೆಸರು) ತನ್ನ ಸ್ವಂತ ಮಗಳಂತೆ ಸ್ವೀಕರಿಸಿ ಸಾಕುತ್ತಿದ್ದನು. ಈಕೆ ಬಲು ರೂಪಸಿ ಹಾಗು ಲಾವಣ್ಯವತಿಯಾಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು