Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:19 - ಕನ್ನಡ ಸತ್ಯವೇದವು C.L. Bible (BSI)

19 ಬಟ್ಟೆಯಿಲ್ಲದ ಬಡವನನು ನೋಡಿದಾಗಲೆಲ್ಲಾ ಹೊದಿಕೆಯಿಲ್ಲದೆ ನಡುಗುವುದನು ಕಂಡಾಗಲೆಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಟ್ಟೆಯಿಲ್ಲದೆ ಸಂಕಟಪಡುತ್ತಿರುವವರನ್ನೂ ಮೇಲಂಗಿಯಿಲ್ಲದ ಬಡವರನ್ನೂ ನಾನು ಕಂಡಾಗಲೆಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ, ಹೊದಿಕೆ ಇಲ್ಲದೆ ನಡುಗುವವರನ್ನೂ ನಾನು ನೋಡಿದಾಗೆಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:19
13 ತಿಳಿವುಗಳ ಹೋಲಿಕೆ  

ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.


ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.


ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ.


ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು