Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:21 - ಕನ್ನಡ ಸತ್ಯವೇದವು C.L. Bible (BSI)

21 ‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು ಅನಾಥನ ಮೇಲೆ ಕೈಮಾಡಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು, ನಾನು ದಿಕ್ಕಿಲ್ಲದವರ ಮೇಲೆ ನನ್ನ ಕೈಮಾಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:21
13 ತಿಳಿವುಗಳ ಹೋಲಿಕೆ  

ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.


ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.


ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ಅನಾಥರೊಂದಿಗೆ ಅನ್ನವನು ಹಂಚಿಕೊಳ್ಳದೆ ತುತ್ತನ್ನೆಲ್ಲಾ ನಾನೇ ಒಂಟಿಯಾಗಿ ಉಂಡೆನೆ?


ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ,


ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು