Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:24 - ಕನ್ನಡ ಸತ್ಯವೇದವು C.L. Bible (BSI)

24 ಬಂಗಾರದಲಿ ನಾನು ಭರವಸೆಯಿಟ್ಟಿದ್ದರೆ ಅಪರಂಜಿಯನೇ ನಾನು ನೆಚ್ಚಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು ಅಪರಂಜಿಗೆ ನಿನ್ನನ್ನೇ ನಂಬಿದ್ದೇನೆ ಎಂದು ಹೇಳಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನಾನು ನನ್ನ ಐಶ್ವರ್ಯಗಳಲ್ಲಿ ಎಂದೂ ಭರವಸವಿಡಲಿಲ್ಲ. ನಾನು ಬಂಗಾರಕ್ಕೆ ‘ನೀನೇ ನನ್ನ ನಿರೀಕ್ಷೆ’ ಎಂದು ಹೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನಾನು ಬಂಗಾರದಲ್ಲಿ ನನ್ನ ನಿರೀಕ್ಷೆಯನ್ನು ಇಟ್ಟಿದ್ದರೆ, ಅಪರಂಜಿಗೆ, ‘ನೀನು ನನ್ನ ಭದ್ರತೆ,’ ಎಂದು ಹೇಳಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:24
18 ತಿಳಿವುಗಳ ಹೋಲಿಕೆ  

ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಲಾಬಾನನ ಮಕ್ಕಳು, “ನಮ್ಮ ತಂದೆಯ ಆಸ್ತಿಪಾಸ್ತಿಯೆಲ್ಲ ಯಕೋಬನ ಪಾಲಾಯಿತು. ನಮ್ಮ ತಂದೆಯ ಆಸ್ತಿಯಿಂದಲೇ ಅವನು ಇಷ್ಟು ಐಶ್ವರ್ಯವನ್ನು ಶೇಖರಿಸಿದ್ದು,” ಎಂದು ಆಡಿಕೊಂಡರು.


ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು.


ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು