Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:25 - ಕನ್ನಡ ಸತ್ಯವೇದವು C.L. Bible (BSI)

25 ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನನ್ನ ಆಸ್ತಿ ದೊಡ್ಡದೆಂದೂ ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನನ್ನ ಐಶ್ವರ್ಯದಿಂದಲೂ ನಾನು ಗರ್ವಿಷ್ಠನಾಗಲಿಲ್ಲ. ನಾನು ಗಳಿಸಿದ ಅಪಾರ ಹಣವೂ ನನ್ನನ್ನು ಉಲ್ಲಾಸಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನನ್ನ ಐಶ್ವರ್ಯವು ಬಹಳ ಎಂದು ಕೊಚ್ಚಿಕೊಂಡಿದ್ದರೆ, ನನ್ನ ಕೈ ಬಹಳ ಸಂಪಾದಿಸಿದೆ ಎಂದು ನಾನು ಸಂತೋಷಪಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:25
18 ತಿಳಿವುಗಳ ಹೋಲಿಕೆ  

ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.


ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.


ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.


ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು