Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:26 - ಕನ್ನಡ ಸತ್ಯವೇದವು C.L. Bible (BSI)

26 ಪ್ರಕಾಶಮಯ ಸೂರ್ಯನನು ನೋಡಿ ಕಾಂತಿಯುತ ಚಂದ್ರನ ಚಲನೆಯನು ದಿಟ್ಟಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೂರ್ಯನು ಪ್ರಕಾಶಿಸುವದನ್ನಾಗಲಿ ಚಂದ್ರನು ಕಳೆದುಂಬಿದವನಾಗಿ ಚರಿಸುವದನ್ನಾಗಲಿ ನಾನು ನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರಕಾಶಮಾನವಾದ ಸೂರ್ಯನನ್ನಾಗಲಿ ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:26
13 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಅನ್ಯ ದೇವರುಗಳನ್ನಾಗಲಿ, ಪೂಜಿಸಬಾರದೆಂದು ನಿಷೇಧಿಸಿರುವ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ, ಪೂಜಿಸಿ, ಆರಾಧಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದುಷ್ಟವಾದುದನ್ನು ನಡೆಸಿದ್ದಾರೆ ಎಂದೂ


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.


ಅದಲ್ಲದೆ, ಜುದೇಯ ಪ್ರಾಂತ್ಯದ ಪಟ್ಟಣಗಳಲ್ಲೂ ಜೆರುಸಲೇಮಿನ ಸುತ್ತಣ ಪ್ರದೇಶದಲ್ಲೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳ್ ದೇವತೆಗೂ ಸೂರ್ಯ ಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಾರತಿಯೆತ್ತುವುದಕ್ಕಾಗಿ ಜುದೇಯದ ರಾಜರಿಂದ ನೇಮಿತರಾಗಿದ್ದ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.


ನನ್ನ ಹೃದಯ ಅವಕ್ಕೆ ಮಾರುಹೋಗಿದ್ದರೆ ಬಾಯ್ಮೇಲೆ ಕೈಯಿಟ್ಟು ಅವನ್ನು ಆರಾಧಿಸಿದ್ದರೆ,


“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು