Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:4 - ಕನ್ನಡ ಸತ್ಯವೇದವು C.L. Bible (BSI)

4 ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದು ಅಂದುಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:4
19 ತಿಳಿವುಗಳ ಹೋಲಿಕೆ  

ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!


ಅಧಿಪತಿಯಂತೆ ಆತನ ಸಾನಿಧ್ಯವನು ಸೇರುತ್ತಿದ್ದೆ ಒಂದೊಂದು ಹೆಜ್ಜೆಯ ಲೆಕ್ಕವನು ಒಪ್ಪಿಸುತ್ತಿದ್ದೆ.


ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು