Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:6 - ಕನ್ನಡ ಸತ್ಯವೇದವು C.L. Bible (BSI)

6 ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:6
19 ತಿಳಿವುಗಳ ಹೋಲಿಕೆ  

'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಕಳ್ಳ ತಕ್ಕಡಿಗಳಿಂದ ಮೋಸದ ಬಟ್ಟುಗಳಿಂದ ಅಳೆದುಹಾಕುವವನು ನಿರ್ದೋಷಿಯೆಂದು ತೀರ್ಮಾನಿಸಲೆ?


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ನ್ಯಾಯದ ತ್ರಾಸುತಕ್ಕಡಿಗಳೆಲ್ಲ ಸರ್ವೇಶ್ವರನ ಏರ್ಪಾಡು; ಚೀಲದ ಕಲ್ಲುತೂಕಗಳೆಲ್ಲ ಆತನ ಕೈಕೆಲಸ.


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


“ನನ್ನ ವಿಪತ್ತನು ತೂಕಮಾಡಿ ನೋಡಿದರೆ ಒಳಿತು ನನ್ನ ದುಃಖಗಳನು ತಕ್ಕಡಿಗೆ ಹಾಕಿದರೆ ಲೇಸು.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಆಗ ತಿಳಿಯುವುದು ನನ್ನ ವಿಪತ್ತು ಕಡಲ ತೀರದ ಮರಳಿಗಿಂತ ಭಾರವೆಂದು. ಎಂತಲೇ ನಾನಾಡಿದ ಮಾತು ದುಡುಕಿನಿಂದ ಆಡಿದ ಮಾತುಗಳೆಂದು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.


ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು