Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:13 - ಕನ್ನಡ ಸತ್ಯವೇದವು C.L. Bible (BSI)

13 ‘ನಿಮಗೆ ಬುದ್ಧಿ ಬಂದಿದೆ’ ಎಂದುಕೊಳ್ಳಬೇಡಿ ‘ದೇವರೇ ಅವನನು ಖಂಡಿಸಲಿ, ನರನಿಂದಾಗದು,’ ಎನ್ನದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು [ಅವನಲ್ಲಿ] ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವದಿಲ್ಲ ಎಂದು ಅಂದುಕೊಳ್ಳಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಮೂವರು, ‘ನಾವು ಜ್ಞಾನವನ್ನು ಕಂಡುಕೊಂಡಿದ್ದೇವೆ, ಯೋಬನ ವಾದಗಳಿಗೆ ಉತ್ತರವನ್ನು ದೇವರು ಕೊಡಬೇಕೇ ಹೊರತು ಮನುಷ್ಯರಲ್ಲ’ ಎಂದು ಹೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:13
23 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


“ಸರ್ವೇಶ್ವರನಾದ ನಾನು ಜುದೇಯದ ಸೈನ್ಯಗಳು ಮೊದಲು ಜಯಗಳಿಸುವಂತೆ ಮಾಡುವೆನು. ಆಗ ದಾವೀದ ವಂಶದವರ ಹಾಗೂ ಜೆರುಸಲೇಮಿನವರ ಘನತೆ ಗೌರವ ಜುದೇಯದವರ ಘನತೆ ಗೌರವವನ್ನು ಮೀರದು.


ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!


ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ.


‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


:ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ!


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.


ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.


ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು.


ಯೋಬನನು ಖಂಡಿಸಬಲ್ಲವನು, ಅವನಿಗೆ ತಕ್ಕ ಉತ್ತರಕೊಡಬಲ್ಲವನು ನಿಮ್ಮಲ್ಲಿ ಯಾರೂ ಇಲ್ಲದಿರುವುದನು ನಾನು ಗಮನಿಸಿದೆನು.


ಯೋಬನು ನನ್ನೊಡನೆ ವಾದಮಾಡಲಿಲ್ಲ ನಿಮ್ಮ ಹಾಗೆ ಅವನಿಗೆ ನಾನು ಉತ್ತರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು