Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:19 - ಕನ್ನಡ ಸತ್ಯವೇದವು C.L. Bible (BSI)

19 ದ್ರಾಕ್ಷಾರಸ ತುಂಬಿ ಬಾಯಿಕಟ್ಟಿದ ಹೊಸಬುದ್ದಲಿಯಂತೆ ನನ್ನ ಅಂತರಂಗವು ಬಿರಿದು ಒಡೆದುಹೋಗುವ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ದಲಿಯಂತೆ ನನ್ನ ಹೊಟ್ಟೆಯು ಒಡೆದುಹೋಗುವ ಸ್ಥಿತಿಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ; ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:19
6 ತಿಳಿವುಗಳ ಹೋಲಿಕೆ  

ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.


ಹೇಳಬೇಕಾದವು ನನ್ನಲ್ಲಿ ತುಂಬಿವೆ ಹೇಳಲು ನನ್ನ ಅಂತರಾತ್ಮ ಒತ್ತಾಯಪಡಿಸುತ್ತಿದೆ.


ತುಟಿ ತೆರೆದು ನಾನು ಉತ್ತರಿಸಲೇಬೇಕು ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು