ಯೋಬ 32:2 - ಕನ್ನಡ ಸತ್ಯವೇದವು C.L. Bible (BSI)2 ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು. ಅಧ್ಯಾಯವನ್ನು ನೋಡಿ |