Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:22 - ಕನ್ನಡ ಸತ್ಯವೇದವು C.L. Bible (BSI)

22 ಮುಖಸ್ತುತಿ ಮಾಡಲು ನನ್ನಿಂದಾಗುವುದಿಲ್ಲ. ಮಾಡಿದರೆ ಸೃಷ್ಟಿಕರ್ತ ನನ್ನನು ಬೇಗ ನಿರ್ಮೂಲಮಾಡಬಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮುಖಸ್ತುತಿಯನ್ನು ಮಾಡುವದಕ್ಕೆ ನನ್ನಿಂದಾಗುವದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ಹೊತ್ತುಕೊಂಡು ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮುಖಸ್ತುತಿ ಮಾಡುವುದೇ ನನಗೆ ತಿಳಿದಿಲ್ಲ. ಮುಖಸುತ್ತಿ ಮಾಡುವುದು ನನಗೆ ಗೊತ್ತಿದ್ದರೆ, ನನ್ನ ಸೃಷ್ಟಿಕರ್ತನು ನನ್ನನ್ನು ಬಹು ಬೇಗನೆ ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:22
10 ತಿಳಿವುಗಳ ಹೋಲಿಕೆ  

ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.


ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.


“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”


ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.


“ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು.


ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು