Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ನೀನು ಹೀಗೆ ಆಡಿದ್ದು ನ್ಯಾಯವಲ್ಲವೆಂಬದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ನಾನು ಅದನ್ನು ನಿರೂಪಿಸುವೆ. ದೇವರು ಮನುಷ್ಯನಿಗಿಂತ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:12
20 ತಿಳಿವುಗಳ ಹೋಲಿಕೆ  

“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.


ದೇವರು ಸರ್ವಶಕ್ತನು, ಯಾರನ್ನೂ ತುಚ್ಛೀಕರಿಸನು ಆತನ ಬುದ್ಧಿಸಾಮರ್ಥ್ಯ ಅಪಾರವಾದುದು.


“ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ನಾನು ನಿನಗೆ ಉತ್ತರಕೊಡುತ್ತೇನೆ ನಿನ್ನ ಮಿತ್ರರಿಗೂ ಪ್ರತ್ಯುತ್ತರ ನೀಡುತ್ತೇನೆ.


“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’


ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ ಅವನನ್ನು ನ್ಯಾಯವಿಚಾರಣೆಗೆ ಕರೆಯುವ ಅವಶ್ಯಕತೆ ಇಲ್ಲ.


ನಾನು ನನ್ನ ಪಾಲಿನ ಉತ್ತರವನು ಹೇಳುವೆನು ನಿನಗೆ ನನ್ನ ಅಭಿಪ್ರಾಯವನು ತಿಳಿಸುವೆನು.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ.


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


ಅದು ಭೂಮಿಗಿಂತಲು ಉದ್ದ ಸಮುದ್ರಕ್ಕಿಂತಲು ಅಗಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು