Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:13 - ಕನ್ನಡ ಸತ್ಯವೇದವು C.L. Bible (BSI)

13 ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬದಾಗಿ ನೀನು ಆತನೊಂದಿಗೆ ವ್ಯಾಜ್ಯವಾಡುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:13
21 ತಿಳಿವುಗಳ ಹೋಲಿಕೆ  

“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.


ಬಾಬಿಲೋನೇ, ನಿನಗೆ ನಾನು ಉರುಲೊಡ್ಡಿದ್ದೆ. ನೀನು ತಿಳಿಯದೆ ಅದರಲ್ಲಿ ಸಿಕ್ಕಿಕೊಂಡೆ. ನೀನು ಸರ್ವೇಶ್ವರನೊಂದಿಗೆ ಹೋರಾಡಿದ್ದರಿಂದ ಬೋನಿನ ವಶವಾದೆ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II


ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು!


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು?


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ನನ್ನ ತಪ್ಪುಗಳನ್ನು ಹುಡುಕುವ ನಿನಗೆ ನನ್ನ ಪಾಪಗಳನ್ನು ವಿಚಾರಿಸುವ ನಿನಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು