Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:17 - ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ದುಷ್ಕಾರ್ಯದಿಂದ ಮನುಷ್ಯನನ್ನು ತಪ್ಪಿಸುತ್ತಾನೆ ಅವನ ಅಹಂಕಾರ ಗರ್ವವನು ಅಡಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:17
16 ತಿಳಿವುಗಳ ಹೋಲಿಕೆ  

ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಮುಗಿದುಹೋದವು ನನ್ನ ದಿನಗಳು ಭಂಗವಾದವು ನನ್ನ ಗುರಿಧ್ಯೇಯಗಳು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.


ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.


ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು