Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:20 - ಕನ್ನಡ ಸತ್ಯವೇದವು C.L. Bible (BSI)

20 ಅವನಿಗೆ ಆಹಾರವೂ ಬೇಸರವಾಗುವುದು ಮೃಷ್ಟಾನ್ನವೂ ಅಸಹ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:20
7 ತಿಳಿವುಗಳ ಹೋಲಿಕೆ  

ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು.


ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು