Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:22 - ಕನ್ನಡ ಸತ್ಯವೇದವು C.L. Bible (BSI)

22 ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:22
17 ತಿಳಿವುಗಳ ಹೋಲಿಕೆ  

ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.


ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ I ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ II


ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


“ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ.


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.


ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.


ಅಸಹ್ಯಪಟ್ಟರು ಅನ್ನ ಆಹಾರಗಳಿಗೆ I ಹತ್ತಿರವಾದರವರು ಮೃತ್ಯುದ್ವಾರಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು