Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:23 - ಕನ್ನಡ ಸತ್ಯವೇದವು C.L. Bible (BSI)

23 ಆದರೆ ಸಹಸ್ರ ದೂತರಲ್ಲೊಬ್ಬ ಮಧ್ಯಸ್ಥನಾಗಿ ಅವನ ಪಕ್ಕದಲ್ಲಿ ನಿಂತು ಅವನ ಕರ್ತವ್ಯವೇನೆಂದು ತಿಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮನುಷ್ಯಕರ್ತವ್ಯವನ್ನು ತೋರಿಸತಕ್ಕ ಸಹಸ್ರದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದುವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥಗಾರನಾಗಿ ಬಂದು ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ ಯಥಾರ್ಥತೆಯನ್ನು ತಿಳಿಸುವುದಕ್ಕೆ ಅವನ ಬಳಿಯಲ್ಲಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:23
32 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಸಹಸ್ರಪುರುಷರಲ್ಲಿ ಯೋಗ್ಯ ಎನ್ನ ತಕ್ಕ ಒಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಮೇಲಾದ ಹೆಂಗಸು ಎನ್ನತಕ್ಕವಳು ಸಿಕ್ಕಲಿಲ್ಲ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.


ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:


ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?


ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,


ಹೌದು, ದೇವರು ಎಂದಿಗೂ ಕೆಡುಕನು ಮಾಡನು ಸರ್ವಶಕ್ತನು ಎಂದಿಗೂ ನೇರವಾದುದನು ಡೊಂಕುಮಾಡನು.


ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.


ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.


ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.


ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.


ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ನಮ್ಮಿಬ್ಬರ ನಡುವೆ ನಿರ್ಣಯಿಸತಕ್ಕವನು ಇಲ್ಲ ಮಧ್ಯಸ್ಥನಾಗಬಲ್ಲ ನ್ಯಾಯಾಧಿಪತಿ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು