Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:26 - ಕನ್ನಡ ಸತ್ಯವೇದವು C.L. Bible (BSI)

26 ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ ಆತನ ದರ್ಶನ ಮಾಡಿ ಉತ್ಸಾಹಧ್ವನಿಗೈದು ತಿರಿಗಿ ಆತನಿಂದ ನೀತಿವಂತನೆನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; ಆತನ ಮುಂದೆ ನೀತಿವಂತನಾಗಿ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:26
35 ತಿಳಿವುಗಳ ಹೋಲಿಕೆ  

ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.


ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ಪ್ರಭುವಿಗೆನ್ನ ಕೃತಜ್ಞತಾ ವಂದನೆ I ಆಲಿಸಿದನವನು ನನ್ನ ವಿಜ್ಞಾಪನೆ II


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


ಅವನ ದೇಹ ಬಾಲ್ಯಕ್ಕಿಂತಲೂ ಕೋಮಲವಾಗುವುದು ಎಳೆತನದ ಚೈತನ್ಯವನ್ನು ಮತ್ತೆ ಅನುಭವಿಸುವನು.


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು