Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:28 - ಕನ್ನಡ ಸತ್ಯವೇದವು C.L. Bible (BSI)

28 ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವದು ಎಂದು ಕೀರ್ತನೆಹಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:28
19 ತಿಳಿವುಗಳ ಹೋಲಿಕೆ  

‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,


ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.


ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.


ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ!


ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ.


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II


ಅವನಿಗೆ ಆಹಾರವೂ ಬೇಸರವಾಗುವುದು ಮೃಷ್ಟಾನ್ನವೂ ಅಸಹ್ಯವಾಗುವುದು.


ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”


ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.


ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು