Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:30 - ಕನ್ನಡ ಸತ್ಯವೇದವು C.L. Bible (BSI)

30 ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದೇವರು ಎರಡು ಸಾರಿಯಲ್ಲದೆ ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:30
15 ತಿಳಿವುಗಳ ಹೋಲಿಕೆ  

ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,


ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.


ಯೋಬನೇ, ನನ್ನ ಮಾತಿಗೆ ಕಿವಿಗೊಡು, ಮೌನದಿಂದ ಕೇಳು, ನಾನೇ ಮಾತಾಡಲಿರುವೆ:


ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II


ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II


ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು