Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:6 - ಕನ್ನಡ ಸತ್ಯವೇದವು C.L. Bible (BSI)

6 ನೋಡು, ನಾನು ಕೂಡ ಜೇಡಿಮಣ್ಣಿನಿಂದ ರೂಪಿತನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡು, ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:6
15 ತಿಳಿವುಗಳ ಹೋಲಿಕೆ  

ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.


ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.


ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ.


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು