Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:11 - ಕನ್ನಡ ಸತ್ಯವೇದವು C.L. Bible (BSI)

11 ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:11
18 ತಿಳಿವುಗಳ ಹೋಲಿಕೆ  

ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.


ದುಷ್ಕಾರ್ಯಗಳು ಆತನಿಗೆ ತಿಳಿದಿರುವ ಕಾರಣ ಇರುಳಲ್ಲೇ ದುರುಳರನು ಕೆಡವಿ ನಾಶಕ್ಕೆ ಗುರಿಮಾಡುವನು.


ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು