Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:17 - ಕನ್ನಡ ಸತ್ಯವೇದವು C.L. Bible (BSI)

17 ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನ್ಯಾಯವನ್ನು ದ್ವೇಷಿಸುವವನು ಕಟ್ಟುಪಾಡು ಮಾಡಾನೇ? ಧರ್ಮಸ್ವರೂಪನೂ ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:17
10 ತಿಳಿವುಗಳ ಹೋಲಿಕೆ  

ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ.


ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.


ಬುದ್ದಿಯಿದ್ದರೆ ಇದನು ಕೇಳಿ ನನ್ನ ಮಾತಿನ ದನಿಗೆ ಕಿವಿಗೊಡಿ.


ದೇವರು ರಾಜನಿಗೆ “ಮೂರ್ಖ’ ಎಂದು ಹೇಳಬಲ್ಲನು ಪ್ರಭುಗಳನ್ನು “ದುಷ್ಟರು” ಎಂದು ಕರೆಯಬಲ್ಲನು.


ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು